ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ವಾಣಿಜ್ಯ LOCAL NEWS

ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಚಟುವಟಿಕೆ ಪ್ರಾರಂಭ.

by 1 on | 2024-01-22 15:05:00

Share: Facebook | Twitter | Whatsapp | Linkedin | Visits: 267


ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಚಟುವಟಿಕೆ ಪ್ರಾರಂಭ.

ಜೆಡಿಎಸ್ ನಾಯಕರು ಬಿಜೆಪಿ ವರಿಷ್ಠ ಬಿ.ಎಸ್.ಯಡಿಯೂರಪ್ಪ ಅವರನ್ನು ನಿನ್ನೆ ರವಿವಾರ ಭೇಟಿ ಮಾಡಿ, ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್‌ನ ಪ್ರಧಾನ ಕಾರ್ಯದರ್ಶಿ ಎಪಿ ರಂಗನಾಥ ಅವರನ್ನು ಕಣಕ್ಕಿಳಿಸಲು ಉಭಯ ಪಕ್ಷಗಳ ಮುಖಂಡರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.



ಕೆಲವು ದಿನಗಳ ಹಿಂದಷ್ಟೇ ಕೇಂದ್ರ ಬಿಜೆಪಿ ನಾಯಕರ ಜತೆ ಜೆಡಿಎಸ್ ನಾಯಕರು ಮೈತ್ರಿ ಘೋಷಣೆ ಮಾಡಿಕೊಂಡಿದ್ದರು. ಬಳಿಕ ಬಿಜೆಪಿ ರಾಜ್ಯ ನಾಯಕರು ಅನೌಪಚಾರಕವಾಗಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದರು.


ರವಿವಾರ ಮಾಜಿ ಸಿಎಂ ಕುಮಾರಸ್ವಾಮಿ ಅವರು ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ತೆರಳಿ ಸಭೆ ನಡೆಸುವ ಮೂಲಕ ಮೈತ್ರಿಗೆ ರಾಜ್ಯ ಮಟ್ಟದಲ್ಲಿ ಮುನ್ನುಡಿ ಬರೆದಿದ್ದಾರೆ. ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆ ಮಾತ್ರವಲ್ಲದೆ, ವಿಧಾನ ಪರಿಷತ್ ಚುನಾವಣೆ ಕುರಿತೂ ಚರ್ಚೆ ನಡೆದಿದೆ ಎನ್ನಲಾಗಿದೆ.



ಉಭಯ ಪಕ್ಷಗಳ ನಾಯಕರ ನಡುವೆ ಸಮನ್ವಯ ಸಾಧಿಸುವುದು, ಲೋಕಸಭೆ ಟಿಕೆಟ್ ಹಂಚಿಕೆ ಹಾಗೂ ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ.



ಸಭೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಮ್ಮುಖದಲ್ಲಿ ಉಭಯ ಪಕ್ಷಗಳ ಪ್ರಮುಖ ನಾಯಕರು ಪ್ರಥಮ ಹಂತದ ಸಭೆ ನಡೆಸಿದ್ದೇವೆ. ಶಿಕ್ಷಕರ ಕ್ಷೇತ್ರದ ಉಪಚುನಾವಣೆ, ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಚರ್ಚಿಸಲಾಗಿದೆ. ಈ ಸಭೆಯ ಮಾಹಿತಿಯನ್ನು ಬಿಜೆಪಿ ಹೈಕಮಾಂಡ್‌ಗೆ ತಲುಪಿಸಲಾಗುವುದು. ಮುಂಬರುವ ಲೋಕಸಭೆ ಚುನಾವಣೆಗೆ ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಿಂದಲೇ ಸಂದೇಶವನ್ನು ನೀಡಲಿದ್ದೇವೆ ಎಂದು ಹೇಳಿದರು.


ಪ್ರಧಾನಿ ಮೋದಿ ಕೈ ಬಲಪಡಿಸಲು ಉಭಯ ಪಕ್ಷಗಳು ಒಟ್ಟಾಗಿ ಹೋಗುತ್ತೇವೆ. ರಾಜ್ಯದಲ್ಲಿ ಕೆಟ್ಟ ಸರ್ಕಾರವಿದೆ ಅದು ತೊಲಗಬೇಕು ಎಂದು ತಿಳಿಸಿದರು.



ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮುಖಂಡರಾದ ಡಿ.ವಿ.ಸದಾನಂದಗೌಡ, ಡಾ.ಸಿ.ಎನ್.ಅಶ್ವಥ್ ನಾರಾಯಣ್, ಗೋವಿಂದ್ ಕಾರಜೋಳ, ಜೆಡಿಎಸ್ ಮುಖಂಡರಾದ ಜಿ.ಟಿ.ದೇವೇಗೌಡ, ಕೆ.ಎ.ತಿಪ್ಪೇಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಬಂಡೆಪ್ಪ ಕಾಶೆಂಪೂರ್, ಬೋಜೇಗೌಡ ಉಪಸ್ಥಿತರಿದ್ದರು.

Search
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment