by 32 on | 2025-11-12 10:50:54
Share: Facebook | Twitter | Whatsapp | Linkedin | Visits: 24
ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತವಾಗಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸಾ ವಿಭಾಗ ಮತ್ತು ವಿಜಯಪುರ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ, ನವೆಂಬರ್ ೧೪ ಶುಕ್ರವಾರ ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೧ ರವರೆಗೆ, ಬಾಗಲಕೋಟೆ ರಸ್ತೆಯ ಬಿ.ಎಲ್.ಡಿ.ಇ ಆಯುರ್ವೇದ ಮಹಾವಿದ್ಯಾಲಯದ ನಗರ ಆರೋಗ್ಯ ಕೇಂದ್ರದಲ್ಲಿ ಉಚಿತ ಮಧುಮೇಹ ಪಾದರೋಗದ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ರಕ್ತ, ಮೂತ್ರ ತಪಾಸಣೆ, ಮೋನೊಫಿಲಾಮೆಂಟ್, ಬಯೋಥೀಸಿಯೋಮೀಟರ್, ಹ್ಯಾರಿಸ್ ಮ್ಯಾಟ್ ಪರೀಕ್ಷೆಗಳನ್ನು ಮಾಡಲಾಗುವುದು. ಅವಶ್ಯವಿರುವ ಮಧುಮೇಹಿಗಳು ಶಿಬಿರದ ಸದುಪಯೋಗವನ್ನು ಪಡೆಯಲು ಶಿಬಿರದ ಸಂಚಾಲಕರು ಮತ್ತು ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ. ಮಂಜುನಾಥ ಕೋಟೆಣ್ಣವರ ಹಾಗೂ ವಿಜಯಪುರ ಶಸ್ತ್ರ ಚಿಕಿತ್ಸಕರ ಸಂಘದ ಕಾರ್ಯದರ್ಶಿ ಡಾ. ರಮಾಕಾಂತ ಬಳೂರಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇಶದ ಇತಿಹಾಸ ವರ್ಣರಂಜಿತವಾಗಿದೆ : ಪ್ರೊ ಅನಿಲ್ ಚೌಹಾನ್
ಶಿಕ್ಷಣದ ಸವಿ ಸರ್ವಶ್ರೇಷ್ಠವಾದದ್ದು : ಡಾ ಅಶೋಕ ಲಿಮಕರ
ಶಬ್ದದ ಅಭಿವ್ಯಕ್ತಿ ಭಾಷೆಗೆ ಭೂಷಣ
ಎನ್ಸಿಸಿ ಕೆಡೆಟ್ ಗಳಿಂದ ವಂದೇ ಮಾತರಂ ಗೀತೆಯ ೧೫೦ ನೇ ವರ್ಷದ ಸಂಭ್ರಮಾಚರಣೆ
ದಾಸ ಶ್ರೇಷ್ಠ ಕನಕದಾಸ ಜಯಂತಿ ಆಚರಣೆ ಕಾರ್ಯಕ್ರಮ
‘ಮೀನುಗಾರಿಕೆ ಮತ್ತು ಜಲಚರ ಸಾಕಾಣಿಕೆ ಪದ್ಧತಿಗಳು’ ಒಂದು ದಿನದ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ