by 26 on | 2026-01-01 14:35:03
Share: Facebook | Twitter | Whatsapp | Linkedin | Visits: 246
ಬಿಎಲ್ಡಿಇಯ ಶ್ರೀ ಬಿ.ಎಂ. ಪಾಟೀಲ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಆಗಜ್ ಎಂಬ ಸ್ವಾಗತ ಕಾರ್ಯಕ್ರಮವನ್ನು ಭವ್ಯವಾಗಿ ಆಯೋಜಿಸಲಾಯಿತು.ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಮನಗೂಳಿಯ ಶ್ರೀ ಸ್ವಾಮಿ ವಿವೇಕಾನಂದ ಆಶ್ರಮದ ಪರಮ ಪೂಜ್ಯ ಶಿವಪ್ರಿಯಾನಂದ ಸ್ವಾಮೀಜಿಯವರು ಆಗಮಿಸಿ ದಿವ್ಯ ಸಾನ್ನಿಧ್ಯ ವಹಿಸಿದರು.ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ ಪೂಜ್ಯರು, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಕಾರ್ಯಸಾಧನೆ ಮತ್ತು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಸಮಾಜದ ಬದಲಾವಣೆಗಳ ಕುರಿತು ಸ್ಪಷ್ಟವಾಗಿ ಸಂದೇಶ ನೀಡಿದರು. ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಬದಲಾವಣೆಗಳು ಯಶಸ್ಸು ಪ್ರಾಪ್ತಿಗೆ ಹೇಗೆ ಸಹಕಾರಿ ಎಂಬುದನ್ನು ವಿವರಿಸುವ ಜೊತೆಗೆ, ಸ್ವಾಮಿ ವಿವೇಕಾನಂದರ ಆದರ್ಶಗಳು ಹಾಗೂ ಸಂದೇಶಗಳನ್ನು ವಿದ್ಯಾರ್ಥಿಗಳ ಹೃದಯವನ್ನು ಮುಟ್ಟುವ ರೀತಿಯಲ್ಲಿ ಅಭಿವ್ಯಕ್ತಿಸಿದರು. “ಯುವಕರು ಮನಸ್ಸು ಮಾಡಿದರೆ ದೇಶದ ಚಿತ್ರಣವನ್ನೇ ಬದಲಾಯಿಸುವ ಸಾಮರ್ಥ್ಯ ಹೊಂದಿದ್ದಾರೆ” ಎಂದು ಹೇಳಿದ ಪೂಜ್ಯರು, ವಿದ್ಯಾರ್ಥಿಗಳು ತಮ್ಮ ಕಾಲೇಜು, ಶಿಕ್ಷಕರು, ತಂದೆ–ತಾಯಿ ಮತ್ತು ಸಮಾಜದ ಹೆಸರನ್ನು ಕಂಗೊಳಿಸುವಂತೆ ನಿಸ್ವಾರ್ಥ ಸೇವೆ ಮತ್ತು ಪರಿಶ್ರಮದಿಂದ ಮುಂದುವರಿಯಬೇಕೆಂದು ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ ಕೊನೆಯಲ್ಲಿ ಸ್ವಾಮೀಜಿಗಳು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಕೇಳಿದ ಹಲವಾರು ಪ್ರಶ್ನೆಗಳಿಗೆ ಉತ್ತರಿಸುತ್ತಾ ಚರ್ಚಾ ಗೋಷ್ಠಿಯಲ್ಲಿ ಭಾಗವಹಿಸಿ ಅಮೂಲ್ಯ ಸಲಹೆಗಳನ್ನು ನೀಡಿದರು. ಹೊಸ ವಿದ್ಯಾರ್ಥಿಗಳು ಅವರ ಉಪದೇಶಗಳಿಂದ ಪ್ರೇರಿತರಾಗಿ ತಮ್ಮ ಭವಿಷ್ಯವನ್ನು ಜವಾಬ್ದಾರಿಯಿಂದ ರೂಪಿಸಿಕೊಳ್ಳುವುದಾಗಿ ತಿಳಿಸಿದರು.ಕಾರ್ಯಕ್ರಮಕ್ಕೆ ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಶಲೋಮನ್ ಚೊಪಡೆ ಮಾತನಾಡಿ, ಈ ಸಂಸ್ಥೆಯಲ್ಲಿ ಪಡೆಯುವ ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದ ಬಲವಾದ ಆಧಾರವಾಗಬೇಕು ಮಾತ್ರವಲ್ಲ, ಉತ್ತಮ ಸಮಾಜ ನಿರ್ಮಾಣಕ್ಕೂ ಸಹಾಯಕವಾಗಬೇಕು ಎಂದು ಹಿತವಚನ ನೀಡಿದರು.ಈ ಸಂದರ್ಭದಲ್ಲಿ ಉಪಪ್ರಾಚಾರ್ಯರು ಡಾ. ಸುಚಿತ್ರ ರಾಟಿ, ಮೊದಲ ವರ್ಷದ ಉಪನ್ಯಾಸಕರು, ಕಾಲೇಜಿನ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು
ಶ್ರೀಮತಿ ಭಾಗ್ಯಶ್ರೀ ಬಾಗೇವಾಡಿ ನಿರೂಪಿಸಿದರು.ಶ್ರೀ ಸುಧೀರ್ ಬಾಲಿ ಸ್ವಾಗತಿಸಿದರು.
ಡಾ. ಸತೀಶ್ ನಡಗಡ್ಡಿ ವಂದನೆ ಸಲ್ಲಿಸಿದರು.
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
ಪಿಜಿ ವಿಭಾಗದಲ್ಲಿ ಸಂಶೋಧನಾ ವಿಷಯಕ್ಕೆ ಸಂಬಂಧಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮ
ಜಮಖಂಡಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ
ಸ್ವಚ್ಛತೆಯೇ ಆರೋಗ್ಯಕ್ಕೆ ಅಡಿಪಾಯ: ಸುನಿಲ್ ರಾಟೋಡ್
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು
ಶಿಕ್ಷಕನಿಗೆ ಬಹುಮುಖದ ವ್ಯಕ್ತಿತ್ವ ಇರಬೇಕು
ಪ್ರಶಿಕ್ಷಣಾರ್ಥಿಗಳ ಕಾರ್ಯಗಾರ ಕಾರ್ಯಕ್ರಮ