by 31 on | 2026-01-02 07:15:15
Share: Facebook | Twitter | Whatsapp | Linkedin | Visits: 442
ವಿಜಯಪುರ ಜಲನಗರದಲ್ಲಿರುವ ಶ್ರೀ ಬಿ ಎಂ ಪಾಟೀಲ್ ಪಬ್ಲಿಕ್ ICSE ಶಾಲೆಯಲ್ಲಿ ದಿನಾಂಕ 28 ಡಿಸೆಂಬರ 2025 ರಂದು ವಾರ್ಷಿಕ ಸ್ನೇಹ ಸಮ್ಮೇಳನವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳು ಹಾಗೂ ಅತಿಥಿಗಳಿಂದ ದ್ವೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು. ನರ್ಸರಿಯಿಂದ ಹತ್ತನೆಯ ತರಗತಿಯವರೆಗೂ ಮಕ್ಕಳು ವಿವಿಧ ರಾಜ್ಯದ ಸಂಸ್ಕೃತಿಯನ್ನು ಬಿಂಬಿಸುವ ನೃತ್ಯ ಮಾಡುವ ಮೂಲಕ ಸ್ವರ್ಗ ಲೋಕವೂ ಭೂಲೋಕಕ್ಕೆ ತಂದಿಳಿಸಿದಂತೆ ಭಾಸವಾಗಿತ್ತು. ಬಿ.ಎಲ್.ಡಿ.ಇ. ವೈದ್ಯಕೀಯ ಕಾಲೇಜಿನ ಡಾ. ಮನೋವಿಜಯ್ ಅವರನ್ನು ಗೌರವಾನ್ವಿತ ಅತಿಥಿಗಳು ಸನ್ಮಾನಿಸಿದರು. ಎಲ್ಲ ವಿಭಾಗಗಳ ಮುಖ್ಯಸ್ಥರಿಗೆ ₹36,000 ನಗದು ಬಹುಮಾನವನ್ನು ನೀಡಿದ ಅವರ ಈ ಮಹತ್ವದ ಕೊಡುಗೆಯನ್ನು ಗುರುತಿಸಿ ಅವರಿಗೆ ಗೌರವ ಸಲ್ಲಿಸಲಾಯಿತು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಶ್ರೀ ಹರೀಶ ಎ ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು, ವಿಜಯಪುರ, ಡಾ ಆನಂದ ಕೆ ಮಾನ್ಯ ಜಿಲ್ಲಾಧಿಕಾರಿಗಳು ವಿಜಯಪುರ ಗೌರವಾನ್ವಿತ ಅತಿಥಿಗಳಾಗಿ ಡಾ ತೇಜಸ್ವಿನಿ ವಲ್ಲಭ ಪ್ರಾಂಶುಪಾಲರು ಹಾಗೂ ವೈದ್ಯಕೀಯ ವಿಭಾಗದ ಡೀನ್, ಶ್ರೀ ಬಿ.ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ವಿಜಯಪುರ ಅತಿಥಿಗಳಾದ ಸಿ.ಎ. ಯಲ್ಲಾಲಿಂಗ್ ಜನವಾಡಉಪ ಹಣಕಾಸು ಅಧಿಕಾರಿ, ಬಿ ಎಲ್ ಡಿ ಇ ಅಸೋಸಿಯೇಷನ್ ವಿಜಯಪುರ ಶಾಲೆಯ ಪ್ರಾಚಾರ್ಯರಾದ ಶ್ರೀ ನವೀನ ಜಾರ್ಜ್ ಹಿರಿಯ ಸಂಯೋಜಕರಾದ ಶ್ರೀಮತಿ ಜಯಾ ಗಲಗಲಿ ಹಾಗೂ ಶಾಲೆಯ ಎಲ್ಲ ಸಂಯೋಜಕರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಯು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು ಹಾಗೂ ಶಾಲೆಯ ವಿದ್ಯಾರ್ಥಿ ಪ್ರತಿನಿಧಿಗಳಾದ ಕುಮಾರ ಮಲ್ಲಿಕಾರ್ಜುನ ಬಿರಾದಾರ ಹಾಗೂ ಕುಮಾರಿ ಪ್ರೇಕ್ಷಾ ಪಾಟೀಲ ಎಲ್ಲರ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಯಶಸ್ವಿಯಾಯಿತು
ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ
ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ
ಉಕ್ಕಲಿ ಆರೋಗ್ಯ ಕೇಂದ್ರದಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದಿಂದ ಮಹತ್ವದ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ
ವ್ಯಕ್ತಿಯ ಸಾಮರ್ಥ್ಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಎಐ ಪಾತ್ರ ಪ್ರಮುಖವಾಗಿದೆ"
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
? 13/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 12/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 11/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 10/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 09/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 08/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?