ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ಸುದ್ದಿ LOCAL NEWS

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು

by 20 on | 2026-02-28 16:02:45

Share: Facebook | Twitter | Whatsapp | Linkedin | Visits: 161


ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು
ಜಮಖಂಡಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಯಿತು.

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ವಿಜ್ಞಾನ ವಸ್ತು ಪ್ರದರ್ಶನ 

ಪ್ರತಿಷ್ಠಿತ ಬಿ.ಎಲ್.ಡಿ.ಇ. ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ), ಜಮಖಂಡಿಯಲ್ಲಿ  ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ವಿಜ್ಞಾನ ಮಾದರಿಗಳ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟಕರಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಾವಳಗಿ ವಿಭಾಗದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ರಘು ಹಿರೇಮಠ ಅವರು ಉದ್ಘಾಟಿಸಿ, ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ಸರ್ ಸಿ ವಿ ರಾಮನ್ ರವರ ಜೀವನ  ಹಾಗೂ ಇಂದಿನ ದಿನದಲ್ಲಿ ವಿಜ್ಞಾನದ ಮಹತ್ವ ಮತ್ತು ವೈಜ್ಞಾನಿಕ ಸಾಧನೆಯಾದ ಎಐ ಕುರಿತು ಮಾತನಾಡಿದರು.

 ಕಾಲೇಜಿನ ಉಪನ್ಯಾಸಕಿಯರಾದ ಪ್ರೊ. ಅಶ್ವಿನಿ ಅನಂತಪೂರ ಅವರು ಪ್ರತಿಜ್ಞಾವಿಧಿ ಬೋಧನೆ ಹಾಗೂ ಪ್ರಾಸ್ತಾವಿಕ ಮಾತನಾಡಿದರು. ಇದೇ ಸಂದರ್ಭದಲ್ಲಿ 2025-26 ನೇ ಸಾಲಿನ  ವಿಜ್ಞಾನ ಕ್ಲಬ್ಬನ್ನು ಉದ್ಘಾಟಿಸಿ, ಪದಾಧಿಕಾರಿಗಳನ್ನು ರಚಿಸಲಾಯಿತು. ಇದೇ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳಿಂದ ಜ್ಞಾನದ ಜೊತೆಗೆ ಸಂಭಾಷಣೆ, ದಿನನಿತ್ಯದ ಜೀವನದಲ್ಲಿ ವಿಜ್ಞಾನ, ವಿಜ್ಞಾನ ಮತ್ತು ಅಂಧಶ್ರದ್ಧೆ, ಎ ಐ  ಮತ್ತು ಮಾನವನ ಬುದ್ಧಿಯ ಕುರಿತು ವೈಜ್ಞಾನಿಕ ನಾಟಕಗಳನ್ನು  ಪ್ರದರ್ಶಿಸಲಾಯಿತು. ಪ್ರಶಿಕ್ಷಣಾರ್ಥಿಗಳಾದ ರಾಮನಗೌಡ ಮಿರ್ಜಿ, ಶ್ರೇಯಾ ಚವ್ಹಾಣ ಅನಿಸಿಕೆ ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕೆ ಜಿ ಜೀರಗಾಳಿ ಅವರು ಅಧ್ಯಕ್ಷತೆ ವಹಿಸಿ ಅಧ್ಯಕ್ಷೀಯ ನುಡಿಗಳನ್ನು ಹೇಳಿದರು. ಕಾರ್ಯಕ್ರಮದ ವೇದಿಕೆಯ ಮೇಲೆ ಪ್ರೊ.ಎಲ್ ಎಂ ಮಾರ್ಕಪನಳ್ಳಿ, ಪ್ರೊ. ಮಹಾದೇವ ಗಲಬಿ,

 ಪ್ರೊ.ಲಕ್ಷ್ಮೀ ಧರ್ಮಟ್ಟಿ ಉಪಸ್ಥಿತರಿದ್ದರು.

 ಪ್ರಶಿಕ್ಷಣಾರ್ಥಿಗಳಾದ ಸಂಜನಾ ಬಾಡಗಿ ಪ್ರಾರ್ಥನೆ, ಸ್ವಾಗತ ಮತ್ತು ಪುಷ್ಪಾರ್ಪಣೆ ಸವಿತಾ ಮಲಗಾರ, ರೋಹಿಣಿ ಔದಿ ಅತಿಥಿಗಳ ಪರಿಚಯ, ನಿರೂಪಣೆ ನವೀನ ಕುಮಾರ ಮತ್ತು ಸೃಷ್ಟಿ ಸಿಂಧೂರ, ಚನಗೌಡ ಬಿರಾದರ ವಂದನಾರ್ಪಣೆ ಮಾಡಿದರು.

Search
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment