by 20 on | 2026-03-12 17:30:59 Last Updated by 20 on2026-04-18 16:24:49
Share: Facebook | Twitter | Whatsapp | Linkedin | Visits: 261
BLDE P G ವಿಭಾಗದಲ್ಲಿ ಇಂದು ಸಂಶೋಧನೆಗೆ ಸಂಬಂಧಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ GFGC ಹುನ್ನೂರು ಕಾಲೇಜಿನ social work HOD ಗಳಾದ Dr. Banashankarayya Maskimath ಆಗಮಿಸಿ ವಿದ್ಯಾರ್ಥಿಗಳಿಗೆ ಸಂಶೋಧನೆಗೆ ಸಂಬಂಧಿಸಿದ ಮಹತ್ವಪೂರ್ಣ ಮಾಹಿತಿ ನೀಡಿ ಸಂಶೋಧನಾ ವಿದ್ಯಾರ್ಥಿಗಳ ಹಲವು ಸಮಸ್ಯೆಗಳಿಗೆ ಪರಿಹಾರಗಳನ್ನು ಹೇಳುತ್ತಾ ಅವರು ಸಂಶೋಧನೆಯ ಮಹತ್ವ, ಅಧ್ಯಯನದ ವಿಧಾನ ಮತ್ತು ವಿದ್ಯಾರ್ಥಿಗಳು ಸಂಶೋಧನಾ ಕ್ಷೇತ್ರದಲ್ಲಿ ಹೇಗೆ ಮುಂದುವರಿಯಬೇಕು ಎಂಬ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ವೇದಿಕೆ ಮೇಲೆ ರಾಜ್ಯಶಾಸ್ತ್ರ ವಿಭಾಗದ ಸಂಯೋಜಕರಾದ ಪ್ರೊ. ಸುರೇಶ್ ಬಿರಾದಾರ, ಇತಿಹಾಸ ವಿಭಾಗದ ಸಂಯೋಜಕರಾದ ಡಾ. ಆದಿತ್ಯ ಹೆಗಡೆ ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥರಾದ ಪ್ರೊ. ಎಸ್. ಎಸ್. ಕಟ್ಟಿಮನಿ ಉಪಸ್ಥಿತರಿದ್ದರು . ಪ್ರೊ ಮೀನಾಕ್ಷಿ ಮಠಪತಿ ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮವನ್ನು ನಿರೂಪಿಸಿದರು ಹಾಗೂ ಪ್ರಾಧ್ಯಾಪಕರುಗಳಾದ ಡಾ. ಸ್ವೇತಾ ಬಸ್ಮೆ ಡಾ. ಎಂ ಎಂ ಅಂಬಲಿ ಡಾ. ಗುರು ಹಿರೇಮಠ ಪ್ರೊ. ಚೇತನಾ ಮಾಳಶೆಟ್ಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಈ ಕಾರ್ಯಕ್ರಮದಲ್ಲಿ ಇತಿಹಾಸ ಮತ್ತು ರಾಜಶಾಸ್ತ್ರ ವಿಭಾಗದ ಪಿಜಿ ವಿದ್ಯಾರ್ಥಿಗಳು ಭಾಗವಹಿಸಿ ಸಂಶೋಧನಾ ವಿಧಾನಗಳ ಕುರಿತು ಉಪಯುಕ್ತ ಮಾಹಿತಿಯನ್ನು ಪಡೆದುಕೊಂಡರು. Dr B M ನುಚ್ಚಿ ನಿರ್ದೇಶಕರು ಪಿಜಿ ವಿಭಾಗ ಇವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಸಂಶೋಧನಾ ಕ್ಷೇತ್ರದ ಅರಿವು ಹೆಚ್ಚಿಸುವಲ್ಲಿ ಸಹಾಯಕವಾಗಿದ್ದು ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಕಾರ್ಯಕ್ರಮದ ಕೊನೆಯಲ್ಲಿ ಡಾ ಆದಿತ್ಯ ಹೆಗಡೆ ಯವರು ವಂದನಾರ್ಪಣೆಯನ್ನು ಮಾಡಿದರು.
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
ಪಿಜಿ ವಿಭಾಗದಲ್ಲಿ ಸಂಶೋಧನಾ ವಿಷಯಕ್ಕೆ ಸಂಬಂಧಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮ
ಜಮಖಂಡಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ
ಸ್ವಚ್ಛತೆಯೇ ಆರೋಗ್ಯಕ್ಕೆ ಅಡಿಪಾಯ: ಸುನಿಲ್ ರಾಟೋಡ್
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು
ಶಿಕ್ಷಕನಿಗೆ ಬಹುಮುಖದ ವ್ಯಕ್ತಿತ್ವ ಇರಬೇಕು
ಪ್ರಶಿಕ್ಷಣಾರ್ಥಿಗಳ ಕಾರ್ಯಗಾರ ಕಾರ್ಯಕ್ರಮ