by 1 on | 2024-06-26 19:31:31
Share: Facebook | Twitter | Whatsapp | Linkedin | Visits: 338
ನಿಯಮಿತವಾಗಿ ಬಸ್‌ಪಾಸ್ ವಿತರಣೆ ಹಾಗೂ ಬಸ್‌ಗಳ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆಗೈದು ಎಬಿವಿಪಿ ಆಗ್ರಹ
ವಿಜಯಪುರ : ಎಬಿವಿಪಿ ವಿಜಯಪುರ ಶಾಖೆ ವತಿಯಿಂದ ಜಿಲ್ಲೆಯ ಕೇಂದ್ರ ಬಸ್ ನಿಲ್ದಾಣ ಮುಂದೆ ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಬಸ್ ಪಾಸ್ ವಿತರಿಸುವಂತೆ ಹಾಗೂ ಬಸ್ ಗಳ ಸಂಖ್ಯೆಯನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ರಸ್ತೆ ತಡೆ ಮಾಡಿ ಪ್ರತಿಭಟನೆ ಕೈಗೊಂಡು ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಜಯಪುರ ಶಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳಾದ ಸಚೀನ ಕುಳಗೇರಿ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪಡೆಯಲು ಅತೀ ಹೆಚ್ಚು ನಗರ ಪ್ರದೇಶಗಳ ಶಾಲಾ ಕಾಲೇಜುಗಳಿಗೆ ಬರುತ್ತಾರೆ. ವಿದ್ಯಾರ್ಥಿಗಳ ತರಗತಿಗಳು ಪ್ರಾರಂಭವಾದ ನಂತರ ಸರಿಯಾದ ಸಮಯಕ್ಕೆ ಬಸ್ ಪಾಸ್ ಅನ್ನು ವಿತರಣೆ ಮಾಡದೇ ಇರುವ ಕಾರಣ ಪ್ರತಿದಿನ ನೂರಾರು ರೂಪಾಯಿಗಳನ್ನು ಖರ್ಚು ಮಾಡಿಕೊಂಡು ಬಡ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಬರುವುದು ಕಷ್ಟದ ಸಂಗತಿ ಆಗಿದೆ. ಸರ್ಕಾರ ಶಾಲಾ ಕಾಲೇಜುಗಳು ಪ್ರಾರಂಭವಾದ ತಕ್ಷಣವೇ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅನ್ನು ಸಕಾಲದಲ್ಲಿ ಒದಗಿಸುವ ನಿಟ್ಟಿನಲ್ಲಿ ಹೆಚ್ಚು ಸಿಬ್ಬಂದಿಗಳನ್ನು ಬಳಸಿಕೊಂಡು ಬಸ್ ಪಾಸ್ ಒದಗಿಸುವ ಅವಶ್ಯಕತೆ ಇದೆ, ಬಸ್ ಪಾಸ್ ಗೆ ಅರ್ಜಿ ಸಲ್ಲಿಸಿದ ನಂತರ ವಾರಗಳ ಕಾಲ ವಿದ್ಯಾರ್ಥಿಗಳು ಬಸ್ ಪಾಸ್ ಅನ್ನು ಪಡೆಯಲು ಕಾಯುವ ಸ್ಥಿತಿ ರಾಜ್ಯದಲ್ಲಿ ಇದೆ. ಇದರಿಂದ ಬಡ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಬಸ್ ಪಾಸ್ ಸಿಗುವರೆಗೂ ಬರದೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದರು.
ಜಿಲ್ಲಾ ಸಂಚಾಲಕ ಮಂಜುನಾಥ ಹಳ್ಳಿ ಇವರು ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿ ಬಹಳಷ್ಟು ವ್ಯತ್ಯಾಸವಿದ್ದು, ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಬಸ್‌ಪಾಸ್ ವಿತರಣೆ ಮಾಡುವಂತೆ ಕ್ರಮಕೈಗೊಳ್ಳಬೇಕು. ಹಾಗೂ ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಿರುವುದ್ದರಿಂದ ಮಹಿಳೆಯರು ವಿನಾಕಾರಣ ಕೆಲಸವಿಲ್ಲದೇ ಬಸ್‌ಗಳಲ್ಲಿ ಹೆಚ್ಚು ಓಡಾಡುತ್ತಿರುವುದ್ದರಿಂದ ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡದೆ ಇರುವುದರಿಂದ ವಿದ್ಯಾರ್ಥಿಗಳಿಗೆ ಬಸ್ ಗಳಲ್ಲಿ ಓಡಾಟ ಮಾಡಲು ಬಹಳ ಕಷ್ಟವಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಬಸ್ಸಿನ ಬಾಗಿಲಲ್ಲಿ ನಿಂತು ಅಪಾಯದ ಪ್ರಯಾಣವನ್ನು ಮಾಡುವುದು ಕಂಡು ಬರುತ್ತಿದೆ, ಸರಕಾರ ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ನಿರ್ಧಾರ ಮಾಡಬೇಕು, ಯಾವ ಹಳ್ಳಿಗಳಿಗೆ ಬಸ್ ಗಳ ಕೊರತೆ ಇದೆ ಆ ಹಳ್ಳಿಗಳಿಗೆ ಸಮರ್ಪಕವಾದ ಬಸ್ ಗಳ ವ್ಯವಸ್ಥೆಯನ್ನು ಶಾಲಾ-ಕಾಲೇಜುಗಳ ಸಮಯಕ್ಕೆ ಒದಗಿಸಬೇಕೆಂದು ಒತ್ತಾಯ ಪಡಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ವಿಭಾಗ ಸಂಘಟನಾ ಕಾರ್ಯದರ್ಶಿ ಹರ್ಷಾ ನಾಯಕ, ಮಲ್ಲಿಕಾರ್ಜುನ ಮಾಳಿ, ಶ್ರೀಕಾಂತ ರೆಡ್ಡಿ, ಸಂದೀಪ ಅರಳಗುಂಡಗಿ, ಕವಿತಾ ಬಿರಾದಾರ, ಐಶ್ವರ್ಯ ಆಸಂಗಿ, ಆರತಿ ನಾವಿ, ಶಿಲ್ಪಾ ಪೂಜಾರಿ, ಬಾಲಾಜಿ ಬಿರಾದಾರ, ಶಿವಾಜಿ, ಶ್ರೀಕಾಂತ, ಸ್ನೇಹಾ ಹಿರೇಮಠ, ನೂರಾರು ಕಾರ್ಯಕರ್ತರು ಇನ್ನಿತರರು ಉಪಸ್ಥಿತರಿದ್ದರು.
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
ಪಿಜಿ ವಿಭಾಗದಲ್ಲಿ ಸಂಶೋಧನಾ ವಿಷಯಕ್ಕೆ ಸಂಬಂಧಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮ
ಜಮಖಂಡಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ
ಸ್ವಚ್ಛತೆಯೇ ಆರೋಗ್ಯಕ್ಕೆ ಅಡಿಪಾಯ: ಸುನಿಲ್ ರಾಟೋಡ್
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು
ಶಿಕ್ಷಕನಿಗೆ ಬಹುಮುಖದ ವ್ಯಕ್ತಿತ್ವ ಇರಬೇಕು
ಪ್ರಶಿಕ್ಷಣಾರ್ಥಿಗಳ ಕಾರ್ಯಗಾರ ಕಾರ್ಯಕ್ರಮ