ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ಜ್ಯೋತಿಷ್ಯ bANGALORE

ಲೋಕಾಯುಕ್ತರಿಗೆ ವೈಟ್ ಟಾಪಿಂಗ್ ರಸ್ತೆ ಕಾಮಗಾರಿಯ ಗುಣಮಟ್ಟ ಹಾಗೂ ಭ್ರಷ್ಟಾಚಾರ ಕುರಿತು ತನಿಖೆ ಮಾಡಿ- ಎಎಪಿ ಮನವಿ

by 1 on | 2023-12-15 08:45:38

Share: Facebook | Twitter | Whatsapp | Linkedin | Visits: 366


�ಲೋಕಾಯುಕ್ತರಿಗೆ ವೈಟ್ ಟಾಪಿಂಗ್ ರಸ್ತೆ ಕಾಮಗಾರಿಯ ಗುಣಮಟ್ಟ ಹಾಗೂ ಭ್ರಷ್ಟಾಚಾರ ಕುರಿತು ತನಿಖೆ ಮಾಡಿ-  ಎಎಪಿ ಮನವಿ

ಬಿಬಿಎಂಪಿ ವ್ಯಾಪ್ತಿಯ ಹಲಸೂರು ಕೆರೆ ಬಳಿಯ ಕೆನ್ಸಿಂಗ್ಟನ್ ಜಂಕ್ಷನ್ ಸಮೀಪ ವೈಟ್ ಟಾಪಿಂಗ್ ರಸ್ತೆ ಕುಸಿದು ಸೃಷ್ಟಿಯಾಗಿದ್ದ ದೊಡ್ಡ ಗುಂಡಿಗೆ ಮಹಾಪೂಜೆ ಮಾಡುವ ಮೂಲಕ ಕಳಪೆ ಕಾಮಗಾರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಆಮ್ ಆದ್ಮಿ ಪಕ್ಷದ ನಾಯಕರು, ಕಳಪೆ ಕಾಮಗಾರಿ ಮತ್ತು ಭ್ರಷ್ಟಾಚಾರದ ಬಗ್ಗೆ ಸಮರ್ಪಕ ತನಿಖೆ ನಡೆಸುವಂತೆ ಲೋಕಾಯುಕ್ತರಿಗೆ ಮನವಿ ಮಾಡಿದ್ದಾರೆ.


ಆಮ್ ಆದ್ಮಿ ಪಕ್ಷದ ಬೆಂಗಳೂರು ಜಿಲ್ಲಾಧ್ಯಕ್ಷ ಡಾ. ಸತೀಶ್ ಕುಮಾರ್ ನೇತೃತ್ವದಲ್ಲಿ ಕರ್ನಾಟಕ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ಮುಖ್ಯ ಲೋಕಾಯುಕ್ತರಿಗೆ ದೂರು ನೀಡಲಾಯಿತು. ಬಳಿಕ ಮಾತನಾಡಿದ ಡಾ. ಸತೀಶ್ ಕುಮಾರ್, ವೈಟ್ ಟಾಪಿಂಗ್ ರಸ್ತೆಗೆ ಖರ್ಚಾಗುವ ಹಣಕ್ಕಿಂತ ಹತ್ತು ಪಟ್ಟು ಹೆಚ್ಚು ನೀಡಲಾಗಿದೆ ಎಂದು ಹೇಳಲಾಗಿದೆ. ಸುಮಾರು 1200 ಕೋಟಿ ರೂಪಾಯಿಗೂ ಅಧಿಕ ಹಣವನ್ನು ಬೆಂಗಳೂರಿನಲ್ಲಿ ವೈಟ್ ಟಾಪಿಂಗ್ ರಸ್ತೆಗಾಗಿ ಬಿಡುಗಡೆ ಮಾಡಲಾಗಿದೆ, ಆದರೆ ಅಂತಹ ರಸ್ತೆಗಳು ಬಿರುಕು ಬಿಟ್ಟಿದ್ದು ಕಳಪೆ ಕಾಮಗಾರಿ ನಡೆದಿದೆ ಎಂದು ಆರೋಪಿಸಿದರು.

Search
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment