by 1 on | 2024-08-08 11:08:25
Share: Facebook | Twitter | Whatsapp | Linkedin | Visits: 301
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಬಗ್ಗೆ ಇಂದು ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಶ್ರೀ.ಡಿ.ಕೆ. ಶಿವಕುಮಾರ್. ಹಾಗೂ ಕೈಗಾರಿಕಾ ಸಚಿವರಾದ ಶ್ರೀ ಎಂ.ಬಿ.ಪಾಟೀಲರು ಅವರು ಮಹತ್ವದ ಸಭೆ ನಡೆಸಿ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದೆ.
ಈಗ ಇರುವ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇರೋದೇ ಎರಡು ರನ್‌ವೇ, ಮುಂದಕ್ಕೆ ಎರಡು ರನ್ ವೇ ಸಾಲದು. ಅದಕ್ಕೆ ಮುಂಜಾಗ್ರತವಾಗಿ ಎರಡನೇ ಏರ್ ಪೋರ್ಟ್ ಮಾಡಬೇಕು ಎಂದು ಹತ್ತಾರು ಸಭೆಗಳು ಆಗಿವೆ. ಈಗಲೇ ಇದರ ಬಗ್ಗೆ ತಯಾರಿ ಮಾಡಿಕೊಳ್ಳಬೇಕು. ಅದಕ್ಕಾಗಿ ಏಳೆಂಟು ಜಾಗ ಗುರುತಿಸಲಾಗುತ್ತಿದೆ.
ನೀರು, ರಸ್ತೆ ಸೇರಿ ಹಲವು ಸೌಕರ್ಯ ನೋಡಿಕೊಂಡು ಏರ್ ಪೋರ್ಟ್ ನಿರ್ಮಾಣ ಮಾಡಬೇಕು. ಹಾಗೇ ಭೂಮಿ, ಗುಡ್ಡ ಗಾಡು ನೋಡಿಕೊಂಡು ಆಯ್ಕೆ ಮಾಡುತ್ತಾರೆ. ಇಂದಿನ ಸಭೆಯಲ್ಲಿ ಚರ್ಚೆಯಾದ ಅಂಶಗಳನ್ನು ಸಿಎಂ ಜೊತೆ ಚರ್ಚಿಸಬೇಕಾಗಿದೆ. ಇದೆಲ್ಲಾ ಆದ್ಮೇಲೆ ದೆಹಲಿಗೆ ವರದಿ ಕಳಿಸಬೇಕಾಗುತ್ತದೆ. ಅವರು ಬಂದು ಎಲ್ಲ ವರದಿ ನೋಡಿ ಯಾವ ಸ್ಥಳದಲ್ಲಿ ಏರ್ ಪೋರ್ಟ್ ಮಾಡಲಿದ್ದಾರೆ? ಯಾವಾಗ ಅನುಮತಿ ನೀಡುತ್ತಾರೆಯೋ ಅಂದಿನಿಂದ ಕೆಲಸ ಆಗಬೇಕು. 2034ರೊಳಗೆ ಹೊಸ ಏರ್ಪೋರ್ಟ್ ಕೆಲಸ ನಡೆಯಬೇಕು. ಇದಕ್ಕೆ ಸುಮಾರು ನಾಲ್ಕು ಸಾವಿರ ಎಕರೆ ಜಾಗ ಬೇಕಾಗುತ್ತದೆ.
ದೆಹಲಿ,ಮುಂಬೈ ಬಿಟ್ಟರೆ ಮೂರನೆಯದ್ದೇ ಬೆಂಗಳೂರು ಏರ್ ಪೋರ್ಟ್. 150 ಕಿಲೋ ಮೀಟರ್ ನಡುವೆ ನಿಲ್ದಾಣ ಮಾಡುವಂತಿಲ್ಲ. ಈಗ ಎರಡು ರನ್ ವೇಗಳಿವೆ. ಇಲ್ಲಿರುವ ಗ್ರೋಥ್ ಗೆ ಈ ಎರಡು ರನ್ ವೇ ಸಾಕಾಗಲ್ಲ. ಒಪ್ಪಂದ ಮುಗಿಯುವುದೊರಳಗೆ ಮತ್ತೊಂದು ಮಾಡಬೇಕು. ಅದು 2034ಕ್ಕೆ ಕ್ಲೋಸ್ ಆಗಲಿದೆ. ಐಡೆಕ್ ಜೊತೆ ಚರ್ಚೆ ಮಾಡಲಾಗಿದೆ. ಬಾಸ್ಟನ್ ಸಂಸ್ಥೆ ನಮಗೆ ಸಲಹೆ ಕೊಟ್ಟಿದೆ. ಸಿಎಂ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದೆ.
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
ಪಿಜಿ ವಿಭಾಗದಲ್ಲಿ ಸಂಶೋಧನಾ ವಿಷಯಕ್ಕೆ ಸಂಬಂಧಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮ
ಜಮಖಂಡಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ
ಸ್ವಚ್ಛತೆಯೇ ಆರೋಗ್ಯಕ್ಕೆ ಅಡಿಪಾಯ: ಸುನಿಲ್ ರಾಟೋಡ್
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು
ಶಿಕ್ಷಕನಿಗೆ ಬಹುಮುಖದ ವ್ಯಕ್ತಿತ್ವ ಇರಬೇಕು
ಪ್ರಶಿಕ್ಷಣಾರ್ಥಿಗಳ ಕಾರ್ಯಗಾರ ಕಾರ್ಯಕ್ರಮ