by 1 on | 2023-12-15 08:58:58
Share: Facebook | Twitter | Whatsapp | Linkedin | Visits: 347
ಬಂದರು ನಗರಿ ಮಂಗಳೂರಿನಿಂದ ಶೆಲ್ ಕಂಪೆನಿಯ ವೈಮಾನಿಕ ಇಂಧನವನ್ನು ಹೊತ್ತು ನೆದರ್ಲೆಂಡ್‌ಗೆ ತೆರಳುತ್ತಿದ್ದ ಸರಕು ಹಡಗಿನ ಮೇಲೆ ಯೆಮೆನ್ ಸಮೀಪ ಕಡಲ್ಗಳ್ಳರು ಕ್ಷಿಪಣಿ ದಾಳಿ ನಡೆಸಿದ್ದಾರೆ.
ಅದೃಷ್ಟವಶಾತ್ ಕಡಲ್ಗಳ್ಳರ ಗುರಿ ತಪ್ಪಿದ ಪರಿಣಾಮ ಹಡಗಿಗೆ ಯಾವುದೇ ಅಪಾಯವಾಗಿಲ್ಲ. ಹಡಗು-ಸಿಬಂದಿ ಸುರಕ್ಷಿತವಾಗಿದ್ದಾರೆ ಎಂದು ಮೂಲ ಗಳು ತಿಳಿಸಿವೆ. ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಉತ್ಪಾದನೆಯಾದ ವೈಮಾನಿಕ ಇಂಧನವನ್ನು ಶೆಲ್ ಕಂಪೆನಿಯು ಖರೀದಿಸಿ ನೆದರ್ಲೆಂಡ್‌ಗೆ ಸಾಗಾಟ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಹಡಗಿಗೆ ಡಿ. 6ರಂದು ಮಂಗಳೂರಿನಲ್ಲಿ ತೈಲ ಸಂಗ್ರಹ ಮಾಡಲಾಗಿತ್ತು.
11ರಂದು ರಾತ್ರಿ ಯೆಮೆನ್‌ನ ಬಂಡುಕೋರರ ಆಡಳಿತವಿರುವ ಬಾಬ್ ಎಲ್-ಮಂಡೆಬ್ ಕೊಲ್ಲಿಯಲ್ಲಿ ಕ್ಷಿಪಣಿ ದಾಳಿ ನಡೆದಿದೆ.
ಎಂಆರ್‌ಪಿಎಲ್‌ನಿಂದ ಶೆಲ್ ಸಹಿತ ವಿವಿಧ ಕಂಪೆನಿಯವರು ತೈಲ ಖರೀದಿ ಮಾಡಿ ಸಂಬಂಧಪಟ್ಟ ಕಂಪೆನಿಯವರ ಹಡಗಿನಲ್ಲಿ ಸಾಗಾಟ ಮಾಡುತ್ತಾರೆ. ಅವರು ದೇಶ-ವಿದೇಶಗಳಿಗೆ ಮಾರುಕಟ್ಟೆ ಆಧಾರಿತವಾಗಿ ಸಾಗಾಟ ಮಾಡುತ್ತಾರೆ ಎಂದು ಎಂಆರ್‌ಪಿಎಲ್ ಮೂಲಗಳು ತಿಳಿಸಿವೆ.
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
ಪಿಜಿ ವಿಭಾಗದಲ್ಲಿ ಸಂಶೋಧನಾ ವಿಷಯಕ್ಕೆ ಸಂಬಂಧಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮ
ಜಮಖಂಡಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ
ಸ್ವಚ್ಛತೆಯೇ ಆರೋಗ್ಯಕ್ಕೆ ಅಡಿಪಾಯ: ಸುನಿಲ್ ರಾಟೋಡ್
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು
ಶಿಕ್ಷಕನಿಗೆ ಬಹುಮುಖದ ವ್ಯಕ್ತಿತ್ವ ಇರಬೇಕು
ಪ್ರಶಿಕ್ಷಣಾರ್ಥಿಗಳ ಕಾರ್ಯಗಾರ ಕಾರ್ಯಕ್ರಮ