by 1 on | 2024-08-21 19:15:53
Share: Facebook | Twitter | Whatsapp | Linkedin | Visits: 274
ರಾಜ್ಯಪಾಲರ ಅಸಂವಿಧಾನ ಕ್ರಮ ಖಂಡಿಸಿ ಬೃಹತ್ ಪ್ರತಿಭಟನೆ!
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ವಿರುದ್ಧ ಗೌರವಾನ್ವಿತ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮವನ್ನು ಖಂಡಿಸಿ, ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ವಿಜಯಪುರದಲ್ಲಿ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ರಾಜ್ಯಪಾಲರು ಬಿಜೆಪಿ ನಾಯಕರ ಬೃಹತ್ ಭ್ರಷ್ಟಾಚಾರ ಪ್ರಕರಣಗಳತ್ತ ಕಣ್ಣೆತ್ತಿಯೂ ನೋಡದೆ, ಹುರುಳಿಲ್ಲದ ಶ್ರೀ ಸಿದ್ದರಾಮಯ್ಯನವರ ಪ್ರಕರಣದಲ್ಲಿ ಖಾಸಗಿ ದೂರಿನ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸಂವಿಧಾನ ವಿರೋಧಿ ಕೃತ್ಯವಾಗಿದೆ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರ ಗೊಳಿಸುವ ಷಡ್ಯಂತ್ರವಾಗಿದ್ದು ರಾಜ್ಯಪಾಲರ ನಡೆ ವಿರುದ್ಧ ವಿಜಯಪುರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿಳ ಕಛೇರಿವರೆಗೆ ಪಾದಯಾತ್ರೆ ಮೂಲಕ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಶಾಸಕರುಗಳಾದ ಶ್ರೀ ಅಪ್ಪಾಜಿ ನಾಡಗೌಡರು, ಶ್ರೀ ಯಶವಂತರಾಯಗೌಡ ಪಾಟೀಲರು, ಶ್ರೀ ಅಶೋಕ್ ಮನಗೂಳಿ, MLC- ಶ್ರೀ ಸುನೀಲಗೌಡ ಪಾಟೀಲ, DCC ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಲೋಣಿ, ಮಾಜಿ ಶಾಸಕರುಗಳಾದ ಶ್ರೀ ರಾಜು ಆಲಗೂರ, ಶ್ರೀ ಮಕ್ಬುಲ್ ಬಾಗವಾನ್, ಮುಖಂಡರಾದ ಶ್ರೀ ಅಬ್ದುಲ್ ಹಮೀದ್ ಮುಶ್ರೀಫ್ ಸೇರಿದಂತೆ ಸಹಸ್ರಾರು ಕಾರ್ಯಕರ್ತರು ಈ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
ಪಿಜಿ ವಿಭಾಗದಲ್ಲಿ ಸಂಶೋಧನಾ ವಿಷಯಕ್ಕೆ ಸಂಬಂಧಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮ
ಜಮಖಂಡಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ
ಸ್ವಚ್ಛತೆಯೇ ಆರೋಗ್ಯಕ್ಕೆ ಅಡಿಪಾಯ: ಸುನಿಲ್ ರಾಟೋಡ್
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು
ಶಿಕ್ಷಕನಿಗೆ ಬಹುಮುಖದ ವ್ಯಕ್ತಿತ್ವ ಇರಬೇಕು
ಪ್ರಶಿಕ್ಷಣಾರ್ಥಿಗಳ ಕಾರ್ಯಗಾರ ಕಾರ್ಯಕ್ರಮ