by 1 on | 2024-09-17 11:43:38
Share: Facebook | Twitter | Whatsapp | Linkedin | Visits: 316
ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಪ್ರಾರಂಭವಾಗಿರುವ ಅಮೃತಾಧಾರೆ ತಾಯಿಹಾಲು ಕೇಂದ್ರದಿಂದ ಸಾವಿರಾರು ತಾಯಿಯ ಎದೆಹಾಲು ವಂಚಿತ ನವಜಾತ ಶಿಶುಗಳಿಗೆ ತಾಯಿ ಹಾಲು ಪೂರೈಸಲಾಗುತ್ತಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿವಿ ಕುಲಪತಿ ಡಾ. ಆರ್. ಎಸ್. ಮುಧೋಳ ತಿಳಿಸಿದರು.
ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಕಳೆದ ವರ್ಷ 2023ರ ಏಪ್ರೀಲ್ 7 ರಿಂದ ಇಲ್ಲಿಯವರೆಗೆ ಅಮೃತಧಾರೆ ತಾಯಿ ಎದೆ ಹಾಲಿನ ಕೇಂದ್ರದ ಮೂಲಕ ನವಜಾತ ಶಿಶುಗಳಿಗೆ ಸುರಕ್ಷಿತ ಮತ್ತು ಪೌಷ್ಟಿಕ ಎದೆಹಾಲು ಒದಗಿಸುತ್ತಿದೆ. ಈ ಮೂಲಕ ತಾಯಂದಿರಿಂದ ಸಾಕಷ್ಟು ಎದೆ ಹಾಲು ಪಡೆಯಲು ಸಾಧ್ಯವಾಗದ ಶಿಶುಗಳಿಗೆ ಎದೆ ಹಾಲಿನ್ನು ಪೂರೈಸಲಾಗುತ್ತಿದೆ. ಪ್ರತಿಯೊಂದು ಮಗುವಿಗೆ ತಾಯಿಯ ಎದೆಹಾಲು ಅಮೃತವಿದ್ದಂತೆ. ಕನಿಷ್ಠ ಆರು ತಿಂಗಳವರೆಗೆ ಮಗುವಿಗೆ ತಾಯಿಯ ಎದೆಹಾಲು ಬೇಕು. ಹೀಗಾಗಿ ಎದೆಹಾಲು ಹೆಚ್ಚಿರುವ ತಾಯಂದಿರು ಹಾಲು ದಾನ ಮಾಡಬಹುದು. ಇದರಿಂದ ದಾನ ಮಾಡುವ ತಾಯಂದಿರ ಆರೋಗ್ಯವೂ ಉತ್ತಮವಾಗಿರುತ್ತದೆ. ಅಲ್ಲದೇ, ಮಕ್ಕಳ ಆರೋಗ್ಯವು ಚೇತರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಈ ಕೇಂದ್ರದಿಂದ 1750ಕ್ಕೂ ಹೆಚ್ಚು ಶಿಶುಗಳಿಗೆ ತಾಯಿಯ ಎದೆಹಾಲು ಪೂರೈಸಲಾಗಿದ್ದು, ಆ ಮಕ್ಕಳು ಆರೋಗ್ಯದಿಂದ ಇವೆ. ಎದೆಹಾಲು ದಾನ ಮಾಡುವ ತಾಯಂದಿರ ಹಾಲನ್ನು ನಾನಾ ಸೋಂಕು ಪರೀಕ್ಷೆ ನಡೆಸಲಾಗುತ್ತದೆ. ನಂತರ ಉಚಿತವಾಗಿ ಈ ಹಾಲನ್ನು ಅಗತ್ಯವಿರುವ ಮಕ್ಕಳಿಗೆ ವಿತರಿಸಲಾಗುತ್ತಿದೆ ಎಂದರು.
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಎಂ. ಬಿ. ಪಾಟೀಲ ಅವರ ಜನಪರ ಸೇವೆಯ ಫಲವಾಗಿ ಆಸ್ಪತ್ರೆಯಲ್ಲಿ ಅಮೃತಧಾರೆ ತಾಯಿ ಎದೆಹಾಲು ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ವಿಜಯಪುರ ಜಿಲ್ಲೆಯ ಸಾರ್ವಜನಿಕರು ಮಕ್ಕಳಶಾಸ್ತ್ರವಿಭಾಗದ ಅಮೃತಧಾರೆ ತಾಯಿ ಹಾಲು ಕೇಂದ್ರದ ಬಗ್ಗೆ ಜನರು ತಿಳಿದುಕೊಂಡು ಇಲ್ಲಿನ ಸೇವೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ, ಮಕ್ಕಳ ವಿಭಾಗದ ಮುಖ್ಯಸ್ಥ ಡಾ. ಎಂ. ಎಂ. ಪಾಟೀಲ ಅವರು ಮನವಿ ಮಾಡಿದ್ದಾರೆ.
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
ಪಿಜಿ ವಿಭಾಗದಲ್ಲಿ ಸಂಶೋಧನಾ ವಿಷಯಕ್ಕೆ ಸಂಬಂಧಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮ
ಜಮಖಂಡಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ
ಸ್ವಚ್ಛತೆಯೇ ಆರೋಗ್ಯಕ್ಕೆ ಅಡಿಪಾಯ: ಸುನಿಲ್ ರಾಟೋಡ್
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು
ಶಿಕ್ಷಕನಿಗೆ ಬಹುಮುಖದ ವ್ಯಕ್ತಿತ್ವ ಇರಬೇಕು
ಪ್ರಶಿಕ್ಷಣಾರ್ಥಿಗಳ ಕಾರ್ಯಗಾರ ಕಾರ್ಯಕ್ರಮ